ಕೊಡಗು :ಜಿಲ್ಲೆಯಲ್ಲಿ ವರುಣ ಮತ್ತೆ ಅಬ್ಬರಿಸಿದ್ದು ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಮಳೆ ಬಿರುಸು ಪಡೆದಿದೆ. ಮಧ್ಯಾಹ್ನ ಸ್ವಲ್ಪ ಬಿಡುವು ಕೊಟ್ಟಿದ್ದ ಮಳೆ ಸಂಜೆ ನಂತರ ಚುರುಕಾಗಿದ್ದು, ದೈನಂದಿನ ಕೆಲಸಗಳಿಗೂ ಮಳೆ ಕಿರಿಕಿರಿ ಉಂಟುಮಾಡಿದೆ.
ಮಲೆನಾಡಿನಲ್ಲಿ ವರುಣನ ಕಣ್ಣಾಮುಚ್ಚಾಲೆ ಆಟ .. ಜನ ಜೀವನ ಆತಂಕದಲ್ಲಿ.. - Kodagu district news
ಕೇಂದ್ರ ಹವಾಮಾನ ಇಲಾಖೆಯ ಮಾಹಿತಿಯಂತೆ ಕರಾವಳಿಯಲ್ಲಿ ಮಳೆ ಮುಂದುವರೆದಿದ್ದು ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಈಗಾಗಲೇ ಮಳೆಯಿಂದ ಹೈರಾಣಾಗಿರುವ ಜನತೆ ಮತ್ತೆ ಮಳೆ ಪ್ರಾರಂಭವಾಗಿದ್ದರಿಂದ ಆತಂಕದಲ್ಲಿದ್ದಾರೆ.
ಕೊಡಗಿನಲ್ಲಿ ಮಳೆ
ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ನಾಪೋಕ್ಲು, ಭಾಗಮಂಡಲ, ವಿರಾಜಪೇಟೆ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈಗಾಗಲೇ ಮಳೆಯಿಂದ ಹೈರಾಣಾಗಿರುವ ಜನತೆ ಮತ್ತೆ ಮಳೆ ಪ್ರಾರಂಭವಾಗಿದ್ದರಿಂದ ಆತಂಕದಲ್ಲಿದ್ದಾರೆ.