ಕೊಡಗು: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ನಾಲ್ಕು ದಿನ ಹೈ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ-ಗಾಳಿ ಬೀಸುತ್ತಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.
ಜಿಲ್ಲೆಯ ಮಡಿಕೇರಿ, ನಾಪೋಕ್ಲು ಕಕ್ಕಬ್ಬೆ, ವಿರಾಜಪೇಟೆ, ಗೋಣಿಕೊಪ್ಪ ಸೇರಿದಂತೆ ವಿವಿಧ ಕಡೆ ವರುಣನ ಆರ್ಭಟ ತೀವ್ರತೆಯನ್ನ ಪಡೆದುಕೊಳ್ಳುತ್ತಿದೆ. ಕಾವೇರಿಯ ಉಗಮಸ್ಥಾನ ತಲಕಾವೇರಿ ಭಾಗಮಂಡಲ ಭಾಗದಲ್ಲೂ ಮಳೆ ಹೆಚ್ಚಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ.
ಹಾರಂಗಿ ಹಿನ್ನೀರು ಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದ್ದು, ಜಲಾಶಯದ ನೀರಿನ ಮಟ್ಟ ಕೂಡ ಏರಿಕೆ ಕಂಡಿದೆ. ಇನ್ನೂ ಭಾರೀ ಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೆಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕೆಲವು ಕಡೆ ಮಣ್ಣು ಕುಸಿತವಾಗಿದೆ. ಮಡಿಕೇರಿ ತಾಲೂಕಿನ ಸಂಪಾಜೆ ಬಳಿ ಅತಿವೃಷ್ಟಿಯಿಂದ ಕುಶಾಲನಗರ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ.
ಕೊಡಗು ಜಿಲ್ಲೆಯಲ್ಲಿ ಜುಲೈ 22 ರಿಂದ ಎರಡು ದಿನ ಆರೆಂಜ್ ಅಲರ್ಟ್. ಜುಲೈ 24 ರಿಂದ ಎರಡು ದಿನ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
(ಧಾರಾಕಾರ ಮಳೆ: ಭೂ ಕುಸಿತ... ಅವಶೇಷಗಳಡಿ 400-500 ಜನ!)