ಕೊಡಗು:ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಮಡಿಕೇರಿ ಸಮೀಪದ ಅಭ್ಯತ್ ಮಂಗಲದ ಬಳಿ ಭೂಕುಸಿತವಾಗಿದೆ. ಸುಮಾರು 50 ಅಡಿ ಆಳಕ್ಕೆ ಭೂಮಿ ಕುಸಿದಿದ್ದು, ಮಡಿಕೇರಿಯಿಂದ ಸಿದ್ದಾಪುರ ರಸ್ತೆ ಸಂಪರ್ಕ ಬಂದ್ ಮಾಡಿ ಎಲ್ಲಾ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿದೆ.
ಕೊಡಗಿನಲ್ಲಿ ಆಶ್ಲೇಷ ಮಳೆ ಅಬ್ಬರ: ಕೆಲವೆಡೆ ಭೂ ಕುಸಿತ, ಹಲವೆಡೆ ರಸ್ತೆ ಸಂಪರ್ಕ ಬಂದ್ - ಕೊಡಗಿ ಜಿಲ್ಲೆಯಲ್ಲಿ ಭೂ ಕುಸಿತ
ಭಾರಿ ಮಳೆಯಾಗುತ್ತಿರುವ ಪರಿಣಾಮ ಮಡಿಕೇರಿ ಸಮೀಪದ ಅಭ್ಯತ್ ಮಂಗಲದ ಬಳಿ ಭೂ ಕುಸಿತವಾಗಿದೆ. ಮಡಿಕೇರಿಯಿಂದ ಸಿದ್ದಾಪುರ ರಸ್ತೆ ಸಂಪರ್ಕ ಬಂದ್ ಮಾಡಿ ಎಲ್ಲಾ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ನಿಷೇಧಿಸಿದೆ.
ಸ್ಥಳಕ್ಕೆ ಎನ್‌ಡಿಆರ್‌ಎಫ್ ರಕ್ಷಣಾ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಆಶ್ಲೇಷ ಮಳೆ ಆರ್ಭಟಿಸುತ್ತಿದ್ದು, ಕಾವೇರಿ ಉಕ್ಕಿ ಹರಿಯುತ್ತಿದೆ. ಭಾರಿ ಗಾಳಿ-ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ.
ನಾಪೋಕ್ಲುವಿನಲ್ಲಿ ರಸ್ತೆ ಮೇಲೆ ನದಿ ಹರಿಯುತ್ತಿದ್ದು, ನಾಪೋಕ್ಲು- ಮೂರ್ನಾಡು ರಸ್ತೆ ಸಂಪರ್ಕ ಬಂದ್ ಆಗಿದೆ. ಜಡಿ ಮಳೆಗೆ ನಾಪೋಕ್ಲು ಸರ್ಕಾರಿ ಶಾಲಾ ಕಟ್ಟಡದ ಮೇಲೆ ಬೃಹತ್ ಮರ ಬಿದ್ದಿದೆ. ಕುಶಾಲನಗರದ ಸಮೀಪ ಬಸವನಹಳ್ಳಿ ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಹೆದ್ದಾರಿ ಬಂದ್ ಆಗಿ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು.