ಕೊಡಗು :ಕೋವಿಡ್-19 ಎರಡನೇ ಅಲೆ ಬಂದ ಸಂದರ್ಭದಲ್ಲಿ ಆಮ್ಲಜನಕ ಕೊರತೆ ಮನಗಂಡು 3ನೇ ಅಲೆ ಬರುವುದರೊಳಗೆ ಹೆಚ್ಚಿನ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆ ಆವರಣದಲ್ಲಿ ನೂತನ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಇದರ ನಿರ್ಮಾಣ ಸ್ಥಳವನ್ನು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕರು ಇಂದು ಪರಿಶೀಲನೆ ಮಾಡಿದರು.
ಮಡಿಕೇರಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಅಧಿಕಾರಿಗಳಿಂದ ಸಂಸದರು ಮತ್ತು ಶಾಸಕರು ಮಾಹಿತಿ ಪಡೆದರು. ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಈಗಾಗಲೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 13 ಸಾವಿರ ಲೀಟರ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವಿದೆ. ಜೊತೆಗೆ ಹೆಚ್ಚುವರಿಯಾಗಿ ಪ್ರತಿ ನಿಮಿಷಕ್ಕೆ ಒಂದು ಸಾವಿರ ಲೀ. ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣವಾಗುತ್ತಿದೆ. ಇದನ್ನು 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.