ಕೊಡಗು: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾರಿ ಮಳೆಗೆ ಮಣ್ಣು ಸಡಿಲಗೊಂಡು ಬೃಹತ್ ಬಂಡೆಯೊಂದು ಉರುಳಿಬಿದ್ದಿದೆ.
ಭಾರಿ ಮಳೆಗೆ ಬೆಟ್ಟದಿಂದ ಉರುಳಿತು ಬೃಹತ್ ಬಂಡೆ ಕೊಡಗಿನ 2ನೇ ಮೊಣ್ಣಂಗೇರಿ ಸಮೀಪದ ಕರ್ತೋಜಿ ಗ್ರಾಮದ ಕೊಂಡಾಡಿ ಪದ್ಮಾವತಿ ತೋಟದಲ್ಲಿ ಘಟನೆ ನಡೆದಿದೆ. ನಿನ್ನೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಟ್ಟದಿಂದ ಕಲ್ಲು ಬಂಡೆ ಉರುಳಿ ನದಿಗೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ. ಕಳೆದೊಂದು ವಾರದಿಂದ ಜಿಲ್ಲೆಯಾದ್ಯಂತ ಮಳೆ ಆಗುತ್ತಿರುವುದರಿಂದ ಬಂಡೆ ಉರುಳಿದೆ. ಘಟನಾ ಸ್ಥಳಕ್ಕೆ ಜಿಲ್ಲಾಡಳಿತದ ತಂಡ ಭೇಟಿ ನೀಡಿ ಪರಿಶೀಲಿಸಿದೆ.
ಇನ್ನು ಜಿಲ್ಲೆಯಲ್ಲಿ ಇಂದಿನಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಘೋಷಿಸಿದ್ದ ರೆಡ್ ಅಲರ್ಟ್ ಹಿಂಪಡೆಯಲಾಗಿದೆ.