ಮಡಿಕೇರಿ: ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿ ಭಾಗದಲ್ಲಿ ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಿಸಲಾಗುತ್ತಿದ್ದು, ಗ್ರಾಮಸ್ಥರೇ ಲಾರಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಕಳೆದ 2 ತಿಂಗಳಿನಿಂದ ನಲ್ವತ್ತೆಕರೆ ಪ್ರದೇಶದಿಂದ ಕೆ.ಆರ್.ನಗರ ಮತ್ತಿತರೆಡೆಗೆ ಅಕ್ರಮವಾಗಿ ಮರಳು ಸಾಗಾಟವಾಗುತ್ತಿದೆ. ಸಿಸಿ ಕ್ಯಾಮರಾ ಅಳವಡಿಸಿದ್ದರೂ ನಿರಂತರವಾಗಿ ಮರಳು ದಂಧೆ ನಡೆಯುತ್ತಿತ್ತು. ಈ ಕುರಿತು ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳದ ಕಾರಣ ಗ್ರಾಮಸ್ಥರೇ ಲಾರಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.