ಕೊಡಗು: ಕಳೆದ ಮೂರು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ನದಿ ಮತ್ತೆ ಭೋರ್ಗರೆದು ಹರಿಯುತ್ತಿದೆ. ಇದರಿಂದಾಗಿ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ಕೊಡಗಿನಲ್ಲಿ ತೀವ್ರಗೊಂಡ ಮಳೆ: ನದಿ ಪಾತ್ರದ ಜನರಲ್ಲಿ ಪ್ರವಾಹದ ಆತಂಕ - ಕಾವೇರಿ ನದಿ
ಕೊಡಗಿನ ಕಾವೇರಿ ಉಗಮ ಸ್ಥಾನ ತಲಕಾವೇರಿ, ಬಾಗಮಂಡಲ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ನೀರಿನ ಹರಿಯುವಿಕೆಯಲ್ಲಿ ಭಾರೀ ಏರಿಕೆಯಾಗಿದೆ.
ಕೊಡಗಿನಲ್ಲಿ ತೀವ್ರಗೊಂಡ ಮಳೆ
ಜಿಲ್ಲೆಯ ಕಾವೇರಿ ಉಗಮ ಸ್ಥಾನ ತಲಕಾವೇರಿ, ಬಾಗಮಂಡಲ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿರುವುದ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ನೀರಿನ ಹರಿಯುವಿಕೆಯಲ್ಲಿ ಭಾರೀ ಏರಿಕೆಯಾಗಿದೆ. ಸಂಗಮ ಭರ್ತಿಯಾಗಲು ಇನ್ನೆರಡು ಅಡಿಗಳು ಮಾತ್ರವೇ ಬಾಕಿ ಇದೆ. ಮಳೆ ಹೀಗೆ ಮುಂದುವರೆದಲ್ಲಿ ತ್ರಿವೇಣಿ ಸಂಗಮ ಭರ್ತಿಯಾಗಿ, ಪ್ರವಾಹ ಎದುರಾಗುವ ಭೀತಿ ಎದುರಾಗಲಿದೆ.
ಇನ್ನು ಮಡಿಕೇರಿ, ನಾಪೋಕ್ಲು, ಸುಂಟಿಕೊಪ್ಪ, ಮಾದಾಪುರ, ಗಾಳಿ ಬೀಡು ಸೇರಿದಂತೆ ಬಹುತೇಕ ಕಡೆಗಳಲ್ಲಿ ನಿರಂತರ ಮಳೆ ಸುರಿಯುತ್ತಲೇ ಇದೆ. ಹೀಗಾಗಿ ಕೊಡಗಿನ ಜನರಲ್ಲಿ ಮತ್ತೆ ಪ್ರವಾಹ ಹಾಗೂ ಭೂಕುಸಿತದ ಭೀತಿ ಉಂಟಾಗಿದೆ.
Last Updated : Sep 13, 2020, 1:07 PM IST