ಕೊಡಗು/ವಿರಾಜಪೇಟೆ: ಐಟಿ ದಾಳಿ ಹಿನ್ನೆಲೆ ಈಗಾಗಲೇ ನಟಿ ರಶ್ಮಿಕಾ ಮಂದಣ್ಣ ತಮ್ಮ ನಿವಾಸಕ್ಕೆ ಆಗಮಿಸಿದ್ದು ಕಳೆದ 2 ಗಂಟೆಗಳಿಂದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಟಿ ನಿವಾಸಕ್ಕೆ ಅಗಮಿಸುತ್ತಿದ್ದಂತೆ ಅಧಿಕಾರಿಗಳು ಮನೆಯೊಳಗೆ ಕರೆದುಕೊಂಡು ಹೋಗಿದ್ದಾಗಿ ವರದಿಯಾಗಿದೆ.
ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿ ವಿವರಣೆ ನೀಡುವಂತೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿರಾಜಪೇಟೆಯಲ್ಲಿರುವ ತಮ್ಮ ನಿವಾಸಕ್ಕೆ ನಟಿ ಆಗಮಿಸಿದ್ದು, ಮಾಧ್ಯಮದವರ ಕಣ್ತಪ್ಪಿಸಿ ಐಟಿ ಅಧಿಕಾರಿಗಳು ನಟಿ ರಶ್ಮಿಕಾ ಮಂದಣ್ಣ ಅವರನ್ನು ವಿಚಾರಣೆಗೆ ಮನೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಸಿನಿಮಾ ಕಾರ್ಯ ನಿಮಿತ್ತ ಚೆನ್ನೈನಲ್ಲಿದ್ದ ರಶ್ಮಿಕಾ ಅಲ್ಲಿಂದ ವಿರಾಜಪೇಟೆಗೆ ಆಗಮಿಸಿದ್ದಾರೆ.