ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ನಿರಾಶ್ರಿತರಿಗೆ ಮನೆಗಳ ಹಸ್ತಾಂತರ: ಹೆಚ್​ಡಿಕೆಗೆ ಆಹ್ವಾನ ನೀಡದ್ದಕ್ಕೆ ಜೆಡಿಎಸ್ ಪ್ರತಿಭಟನೆ

ನಿರಾಶ್ರಿತರಿಗೆ ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಡಿಗಲ್ಲು ಹಾಕಿದಂತಹ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸದ ಕಾರಣ ಜೆಡಿಎಸ್​​ ಪ್ರತಿಭಟನೆ ನಡೆಸಿತು.

jds protest against bjp government
ಜೆಡಿಎಸ್ ಪ್ರತಿಭಟನೆ

By

Published : Jun 4, 2020, 3:56 PM IST

ಸೋಮವಾರಪೇಟೆ (ಕೊಡಗು):ಸಮ್ಮಿಶ್ರ ಸರ್ಕಾರದಲ್ಲಿ ನಿರಾಶ್ರಿತರ ಮನೆಗಳಿಗೆ ಅಡಿಗಲ್ಲು ಹಾಕಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಆಹ್ವಾನಿಸದ ಕಾರಣ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ 2018ನೇ ಸಾಲಿನಲ್ಲಿ ಜಿಲ್ಲೆಯ ನಿರಾಶ್ರಿತರಿಗೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮನೆಗಳನ್ನು ನಿರ್ಮಿಸಲು ಶ್ರಮಿಸಿತ್ತು. ಆದರೆ ಬಿಜೆಪಿ ಸರ್ಕಾರದಲ್ಲಿ ಕನಿಷ್ಠ ಸೌಜನ್ಯಕ್ಕಾದರೂ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಇದೊಂದು ಬಿಜೆಪಿ ನೇತೃತ್ವದ ಪ್ರಾಯೋಜಿತ ಕಾರ್ಯಕ್ರಮ‌ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ನೇತೃತ್ವದಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ

ಕುಮಾರಸ್ವಾಮಿ ಅವರ ಅವಧಿಯಲ್ಲಿ ಕೊಡಗಿಗೆ ಸಾಕಷ್ಟು ಶ್ರಮಿಸಿದ್ದಾರೆ. 840 ನಿರಾಶ್ರಿತರ ಮನೆಗಳಿಗೆ ಅಡಿಗಲ್ಲು ಹಾಕಿದ್ದರು. ಅವರ ಶ್ರಮ ಹಾಗೂ ಸಾಧನೆ ಇದರಲ್ಲಿ ಮುಖ್ಯವಾಗಿದೆ. ಅವರ ಸಾಧನೆಯನ್ನು ಮರೆಮಾಚಿ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಈ ಕ್ರಮವನ್ನು ‌ನಾವು ಖಂಡಿಸುತ್ತೇವೆ ಎಂದು ಕಿಡಿಕಾರಿದರು. ಇದೇ ವೇಳೆ ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿದರು.

ABOUT THE AUTHOR

...view details