ಕೊಡಗು: ಕಳೆದ ವರ್ಷದ ಸುರಿದ ಮಳೆಯಿಂದ ನೆಲೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿಳಂಬ ನೀತಿ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ನಿರಾಶ್ರಿತರನ್ನು ಕಡೆಗಣಿಸಿದ ಸರ್ಕಾರದ ಧೋರಣೆ ಖಂಡಿಸಿ ಜೆಡಿಎಸ್ ಕಾಲ್ನಡಿಗೆ ಜಾಥಾ - JDS Protest
ಸಂತ್ರಸ್ತರಿಗೆ ಪರಿಹಾರ ವಿಳಂಬ ನೀತಿ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಕೊಡಗಿನಲ್ಲಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜೆಡಿಎಸ್ ಕಾಲ್ನಡಿಗೆ ಜಾಥಾ
ಮಡಿಕೇರಿ ತಾಲೂಕಿನ ನಾಪೊಕ್ಲುವಿನ ಹಳೆ ತಾಲೂಕು ಕೇಂದ್ರದಿಂದ ಮೂರ್ನಾಡುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು.
ವರ್ಷ ಕಳೆದರೂ ನೂರಾರು ಸಂತ್ರಸ್ತರಿಗೆ ಬಿಜೆಪಿ ಸರ್ಕಾರ ಪರಿಹಾರ ನೀಡಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿಯವರು ಮನೆಗಳನ್ನು ನಿರ್ಮಿಸಲು ಅಡಿಗಲ್ಲು ಹಾಕಿದ್ದರೂ ಸಹ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.