ಕೊಡಗು:ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿ ಖಂಡಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.
ಕೊಡಗು: ಡಿ. ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - CBI raids on KPCC president Dkeshi's house
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಹಿನ್ನೆಲೆ ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗು: ಡಿ. ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ..!
ನಗರದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನೂರಾರು ಪ್ರತಿಭಟನಾನಿರತ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗಾಂಧಿ ಮೈದಾನದಿಂದ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದರು.
ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರ ಡಿ. ಕೆ. ಶಿವಕುಮಾರ್ ಮೇಲೆ ಪದೇ ಪದೇ ಐಟಿ, ಸಿಬಿಐ ದಾಳಿಗಳನ್ನು ಮಾಡಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯ ರಾಜಕೀಯದಲ್ಲಿ ಮುಂಚೂಣಿಯಲ್ಲಿರುವ ಡಿಕೆಶಿ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.