ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ ಪಾಸಿಟಿವ್​​, ಡಿಹೆಚ್​​​​​ಓ ಸ್ಪಷ್ಟನೆ - somavarapete

ಕೊರೊನಾ ಆತಂಕದಿಂದ ಕೊಂಚ ದೂರಾಗಿದ್ದ ಕೊಡಗಿನಲ್ಲಿ ಇದೀಗ ಮತ್ತಿಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಮವಾರಪೇಟೆಯ ಓರ್ವ ಹಾಗೂ ದುಬೈನಿಂದ ಬಂದ್ದಿದ್ದ ಓರ್ವನಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಡಿಹೆಚ್​​ಓ ಸ್ಪಷ್ಟನೆ ನೀಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

Kodagu DHO confirms that two more coronavirus positive in Districts
ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ ಪಾಸಿಟಿವ್​​, ಡಿಹೆಚ್​​​​​ಓ ಸ್ಪಷ್ಟನೆ

By

Published : Jun 22, 2020, 6:33 PM IST

ಕೊಡಗು:ದುಬೈ ಹಾಗೂ ಕೊಡಗಿನ ಸೋಮವಾರಪೇಟೆ ಸಮೀಪದ ನಿವಾಸಿ ಇಬ್ಬರಿಗೆ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ. ದುಬೈನಿಂದ ಬಂದಿದ್ದ ವ್ಯಕ್ತಿ ಹಾಗೂ ಸೋಮವಾರಪೇಟೆಯ ಶನಿವಾರಸಂತೆ ನಿವಾಸಿಗಳಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಈ ಹಿನ್ನೆಲೆ ನಿವಾಸಿಯ ಗ್ರಾಮವನ್ನು ಜಿಲ್ಲಾಡಳಿತ ಸಂಪೂರ್ಣ ಸೀಲ್‌ಡೌನ್ ಮಾಡಿದೆ. ಗದಗ ಜಿಲ್ಲೆಗೆ ಹೋಗಿ ಬಂದಿದ್ದ ವ್ಯಕ್ತಿ ಬಳಿಕ ಗ್ರಾಮದಲ್ಲೆಲ್ಲಾ ಓಡಾಡಿದ್ದಾನೆ ಎನ್ನಲಾಗಿದೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಗ್ರಾಮವನ್ನು ಸೀಲ್‌ಡೌನ್ ಮಾಡಿದೆ.‌

ಇನ್ನು ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಹುತೇಕ ಖಚಿತವಾಗಿದೆ. ಇಬ್ಬರನ್ನೂ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಡಿಎಚ್ಓ ಮೋಹನ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details