ಕೊಡಗು: ರಾಜ್ಯ ಸರ್ಕಾರ ತಿದ್ದುಪಡಿ ಮಾಡಿರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆಯನ್ನು ವಿರೋಧಿಸಿ ರಾಜ್ಯ ರೈತ ಸಂಘ ಜಿಲ್ಲಾ ಮುಖಂಡರು ಸುಧಾರಣಾ ಕಾಯ್ದೆ ತಿದ್ದುಪಡಿ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಕೊಡಗು: ಭೂ ಸುಧಾರಣಾ ನೀತಿ ವಿರೋಧಿಸಿ ಕಾಯ್ದೆ ಪ್ರತಿ ಸುಟ್ಟು ರೈತರ ಪ್ರತಿಭಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನಲ್ಲಿ ಪ್ರತಿಭಟಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಗೋಣಿಕೊಪ್ಪಲಿನ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿದ ರೈತ ಸಂಘದ ಮುಖಂಡರು ಮತ್ತು ಕಾರ್ಯಕರ್ತರು, ರಾಜ್ಯ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಮನು ಸೋಮಯ್ಯ, ಈ ಕಾಯ್ದೆಯನ್ನು ತಿದ್ದುಪಡಿ ಮಾಡುವುದರಿಂದ ರಾಜ್ಯದ ರೈತರ ಭೂಮಿಗೆ ಸದ್ಯದ ಸ್ಥಿತಿಯಲ್ಲಿ ಒಳ್ಳೆಯ ಬೆಲೆ ಬಂದರೂ ಅದು ಬಂಡವಾಳ ಶಾಹಿಗಳ ಮತ್ತು ಯಾರೋ ಕೆಲವು ವ್ಯಕ್ತಿಗಳ ಕೈ ಸೇರಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೈತರು ಎಲ್ಲವನ್ನೂ ಕಳೆದುಕೊಂಡು ಬೀದಿಪಾಲಾಗುವ ಸ್ಥಿತಿಗೆ ತಲುಪಲಿದ್ದಾರೆ.
ಇದರಿಂದ ಸಣ್ಣ ಮತ್ತು ಅತೀ ಸಣ್ಣ ರೈತರು ನಿರ್ಗತಿಕರಾದರೂ ಆಶ್ಚರ್ಯವಿಲ್ಲ. ಹೀಗಾಗಿ ಸರ್ಕಾರ ಈ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.