ಕೊಡಗು: ತೋರಾ ಗ್ರಾಮದ ಭೂ ಕುಸಿತದಲ್ಲಿ ಕಣ್ಮರೆಯಾಗಿದ್ದವರ ಪೈಕಿ ಮತ್ತೊಬ್ಬ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತ ಹಾಗೂ ಪ್ರವಾಹಕ್ಕೆ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಕೊಡಗು ಭೂ ಕುಸಿತ ಪ್ರಕರಣ.. ಮತ್ತೊಂದು ಮೃತದೇಹ ಪತ್ತೆ - ಮೃತದೇಹ ಪತ್ತೆ
ತೋರಾ ಗ್ರಾಮದ ಭೂ ಕುಸಿತದಲ್ಲಿ ಕಣ್ಮರೆಯಾಗಿದ್ದವರ ಪೈಕಿ ಮತ್ತೊಬ್ಬ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತ ಹಾಗೂ ಪ್ರವಾಹಕ್ಕೆ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿದೆ.
ಭೂ ಕುಸಿತದಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹ ಪತ್ತೆ
ತೋರಾ ಗ್ರಾಮದ ಶಂಕರ (60) ಭೂ ಕುಸಿತಕ್ಕೆ ಸಿಲುಕಿ ಮೃತ ಪಟ್ಟ ವ್ಯಕ್ತಿ. ಶಂಕರ ಅವರ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನು ಕಣ್ಮರೆ ಆಗಿರುವ 5 ಜನರಿಗೆ ಎನ್‌ಡಿಆರ್‌ಎಫ್ ಹಾಗೂ ಪೊಲೀಸ್ ಪಡೆಗಳು ಹಿಟಾಚಿ ಯಂತ್ರಗಳನ್ನು ಬಳಸಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ಅಗಸ್ಟ್ 10 ರಂದು ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ಬೃಹತ್ ಬೆಟ್ಟವೇ ಗ್ರಾಮದ ಮೇಲೆ ಕುಸಿದಿತ್ತು.