ಕರ್ನಾಟಕ

karnataka

ETV Bharat / state

ಉಪನ್ಯಾಸಕರಿಗೆ ಕೊರೊನಾ : ಪರೀಕ್ಷೆ ಮಾಡದೇ ವಿದ್ಯಾರ್ಥಿಗಳಿಗೆ, ಸಿಬ್ಬಂದಿ ವರ್ಗಕ್ಕೆ ರಜೆ - ಕೊರೊನಾ ಟೆಸ್ಟ್ ಮಾಡದೆ ಶಾಲೆಗೆ ರಜೆ

ಕಾಲೇಜು ಉಪನ್ಯಾಸಕರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟರೂ ಸಹ ವಿದ್ಯಾರ್ಥಿಗಳನ್ನು ಮತ್ತು ಸಿಬ್ಬಂದಿ ವರ್ಗವನ್ನು ಪರೀಕ್ಷೆಗೆ ಒಳಪಡಿಸದೆ ರಜೆ ನೀಡಿದ ಘಟನೆ ಪೊನ್ನಪೇಟೆಯಲ್ಲಿ ಜರುಗಿದೆ. ಇದರಿಂದ ಸೋಂಕು ವ್ಯಾಪಕವಾಗಿ ಹರಡುವ ಭೀತಿಯಲ್ಲಿ ಜನರಿದ್ದಾರೆ.

kodagu-lecturer-tested-corona-positive
ಉಪನ್ಯಾಸಕರಿಗೆ ಕೊರೊನಾ

By

Published : Dec 23, 2021, 6:59 AM IST

ಕೊಡಗು :ಜಿಲ್ಲೆಯ ಕಾಲೇಜುವೊಂದರ ಉಪನ್ಯಾಸಕರಿಗೆ ಕೊರೊನಾ ಸೋಂಕು ಹರಡಿದ ಹಿನ್ನೆಲೆ ವಿದ್ಯಾರ್ಥಿಗಳನ್ನು ಕೋವಿಡ್​ ಪರೀಕ್ಷೆಗೆ ಒಳಪಡಿಸದೆ ರಜೆ ನೀಡಿ ಮನೆಗೆ ಕಳುಹಿಸಲಾಗಿದೆ ಎನ್ನಲಾಗ್ತಿದೆ. ಇದರಿಂದ ಪೋಷಕರಿಗೆ ಸೋಂಕು ಹರಡುವ ಭೀತಿ ಎದುರಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ ಈಗಾಗಲೇ 21 ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ.

ಪರೀಕ್ಷೆ ಮಾಡದೇ ವಿದ್ಯಾರ್ಥಿಗಳಿಗೆ, ಸಿಬ್ಬಂದಿ ವರ್ಗಕ್ಕೆ ರಜೆ

ಪೊನ್ನಪೇಟೆಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ ವಿದ್ಯಾರ್ಥಿಗಳಿಗೆ ಹಾಗೂ ಜೊತೆಗಿದ್ದ ಶಿಕ್ಷಕರಿಗೆ, ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡದೆ ಕಾಲೇಜಿಗೆ ರಜೆ ನೀಡಲಾಗಿದೆ.

ಇದರಿಂದ ಪೋಷಕರಿಗೆ, ಸ್ಥಳೀಯರಿಗೆ ಆತಂಕ ಶುರುವಾಗಿದ್ದು, ಕೊರೊನಾ ಪರೀಕ್ಷೆ ಮಾಡುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳೀಯರ ಒತ್ತಾಯದ ಮೇಲೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಲೆಗೆ ಭೇಟಿ ನೀಡಿದ್ದು, ಸ್ಯಾನಿಟೈಸ್ ಮಾಡಲು ಮುಂದಾಗಿದ್ದಾರೆ.

ABOUT THE AUTHOR

...view details