ಕೊಡಗು:ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿಗಳು ಲಂಚ ಪಡೆದು ಹೊರ ಜಿಲ್ಲೆಯವರಿಗೆ ಉದ್ಯೋಗ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲೆಯ ಜನರು ವಿಶ್ವವಿದ್ಯಾನಿಲಯದ ಕುಲಪತಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನಲ್ಲಿರುವ ಚಿಕ್ಕಾಳುವಾರ ಗ್ರಾಮದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಕೊಡಗು ಜಿಲ್ಲೆಯವರನ್ನು ಬಿಟ್ಟು ಲಂಚ ಪಡೆದು ಹೊರಗುತ್ತಿಗೆ ಆಧಾರದ ಮೇಲೆ ಬೇರೆ ಜಿಲ್ಲೆಯವರನ್ನು ಕಾಲೇಜಿಗೆ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.