ಮಡಿಕೇರಿ:ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿರುವ ಘಟನೆಗೆ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಮಂಗಳೂರು ಗೋಲಿಬಾರ್ ಖಂಡಿಸಿ ಕೊಡಗಿನ ಹಲವೆಡೆ ಅಂಗಡಿ-ಮುಂಗಟ್ಟುಗಳು ಬಂದ್.. - kodagu latest news
ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿರುವ ಘಟನೆಗೆ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ನಗರದ ಹಲವೆಡೆ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ.
ಪೊಲೀಸರ ಕ್ರಮ ಖಂಡಿಸಿ ಜಿಲ್ಲೆಯ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನ ಸಿದ್ದಾಪುರ, ನೆಲ್ಯಹುದಿಕೇರಿ ಸೇರಿ ಹಲವೆಡೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಮೂಲಕ ಪೊಲೀಸರ ನಡೆ ಖಂಡಿಸಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಕೆಎಸ್ಆರ್ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದ್ದು, ನಗರದಲ್ಲಿ ಎಂದಿನಂತೆ ಜನ ಸಾಮಾನ್ಯರು ಓಡಾಡುತ್ತಿದ್ದಾರೆ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.