ಕೊಡಗು: ಜಿಲ್ಲೆಯಾದ್ಯಂತ ರಾತ್ರಿಯಿಡೀ ಮಳೆಯಾಗಿರುವ ಹಿನ್ನೆಯಲ್ಲಿ ಅಗತ್ಯ ವಸ್ತುಗಳ ಖರೀದಿಸಲು ಜನರು ಪ್ರಯಾಸ ಪಡಬೇಕಾಗಿದೆ.
ಕೊಡಗಿನಲ್ಲಿ ಮಳೆ: ಅಗತ್ಯ ವಸ್ತುಗಳ ಖರೀದಿಗೆ ಜನರ ಪರದಾಟ - ಅಗತ್ಯ ವಸ್ತುಗಳ ಖರೀದಿಗೆ ಜನರ ಪರೆದಾಟ
ಕೊಡಗಿನಲ್ಲಿ ಸುರಿದ ಮಳೆಯಿಂದ ಅಗತ್ಯ ವಸ್ತುಗಳನ್ನು ಕೊಳ್ಳಲು ಜನ ಪರದಾಡುವಂತಾಗಿದೆ.
ಕೊಡಗಿನಲ್ಲಿ ಮಳೆ : ಅಗತ್ಯ ವಸ್ತುಗಳ ಖರೀದಿಗೆ ಜನರ ಪರೆದಾಟ
ನಿನ್ನೆ ತಡರಾತ್ರಿಯಿಂದ ಎಡೆಬಿಡದೆ ಮಳೆಯಾಗಿದ್ದು, ಮುಂಜಾನೆಯೂ ತುಂತುರು ಪ್ರಾರಂಭವಾಗಿದೆ. ಮಡಿಕೇರಿ, ಕುಶಾಲನಗರ ಹಾಗೂ ಸೋಮವಾರಪೇಟೆ ಸೇರಿದಂತೆ ವಿವಿಧೆಡೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ವಾರದಲ್ಲಿ ಮೂರು ದಿನಗಳು ಮಾತ್ರ ನಿಗದಿತ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ನಡುವೆ ನಿರಂತರ ಸುರಿಯುತ್ತಿರುವ ಮಳೆಯಿಂದ ಜನತೆ ಅಗತ್ಯ ವಸ್ತುಗಳನ್ನು ಖರೀದಿಸಲು ತೊಂದರೆ ಅನುಭವಿಸಿದ್ದಾರೆ.