ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಕೋವಿಡ್‌ ನಿಯಮಾವಳಿ ಸಡಿಲ: ಜಿಲ್ಲೆಯ ಪ್ರವೇಶಕ್ಕೆ ಕೋವಿಡ್‌ ರಿಪೋರ್ಟ್ ಕಡ್ಡಾಯ

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅನ್‍ಲಾಕ್ ನಿಯಮಾವಳಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜುಲೈ 19 ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಗೊಳಿಸಲಾಗಿದೆ.

KODAGU UNLOCK
ಜಿಲ್ಲಾಧಿಕಾರಿ ಸ್ಪಷ್ಟನೆ

By

Published : Jul 9, 2021, 9:26 PM IST

Updated : Jul 9, 2021, 9:36 PM IST

ಕೊಡಗು: ಕೊರೊನಾ ಕಡಿಮೆಯಾದ ಹಿನ್ನೆಲೆಯಲ್ಲಿ ಕೊಡಗಿಗೆ ‌ಅನ್​ಲಾಕ್ ಭಾಗ್ಯ ಸಿಕ್ಕಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಕೋವಿಡ್ ನೆಗೆಟಿವ್‌ ರಿಪೋರ್ಟ್ ಇದ್ದರೆ ಮಾತ್ರ ಜಿಲ್ಲೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಕೊಡಗಿನ ಗಡಿಯಲ್ಲಿ ತಪಾಸಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತೆ.‌ ಹೊರ ಜಿಲ್ಲೆ, ರಾಜ್ಯದಿಂದ ಆಗಮಿಸಿರುವವರಿಗೆ ಕೋವಿಡ್ ರಿಪೋರ್ಟ್​ ಕಡ್ಡಾಯ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ‌ಹೇಳಿದರು.

ಜಿಲ್ಲಾಧಿಕಾರಿ ಸ್ಪಷ್ಟನೆ

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅನ್‍ಲಾಕ್ ನಿಯಮಾವಳಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜುಲೈ 19 ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಗೊಳಿಸಲಾಗಿದೆ. ಕಂಟೈನ್‌ಮೆಂಟ್‌ ವಲಯದಲ್ಲಿ ಯಾವುದೇ ಚಟುವಟಿಕೆಗಳು ಇರುವುದಿಲ್ಲ. ಸರ್ಕಾರದ ಮಾರ್ಗಸೂಚಿಗೊಳಪಟ್ಟು ಗರಿಷ್ಠ 20 ಮಂದಿ ಮೀರದಂತೆ ಅಂತ್ಯಕ್ರಿಯೆ/ಶವಸಂಸ್ಕಾರ ನಡೆಸಬಹುದು ಎಂದು ಅವರು ತಿಳಿಸಿದ್ದಾರೆ.

ಗರಿಷ್ಠ 100 ಮಂದಿ ಮೀರದಂತೆ ಮದುವೆ, ಕೌಟುಂಬಿಕ ಸಮಾರಂಭ, ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶವಿದೆ. ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ. ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಎಲ್ಲಾ ಶೈಕ್ಷಣಿಕ ಸಂಸ್ಥೆಗಳು/ಟ್ಯುಟೋರಿಯಲ್ಸ್/ಕಾಲೇಜುಗಳು ಸರ್ಕಾರದ ಮುಂದಿನ ಆದೇಶದವರೆಗೆ ಮುಚ್ಚಲ್ಪಟ್ಟಿರುತ್ತದೆ. ತರಬೇತಿ ಉದ್ದೇಶಕ್ಕಾಗಿ ಮಾತ್ರ ಸ್ಪೋರ್ಟ್ಸ್​ ಕಾಂಪ್ಲೆಕ್ಸ್ ಮತ್ತು ಸ್ಟೇಡಿಯಂಗಳನ್ನು ತೆರೆಯಬಹುದು ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಆದೇಶ ಹೊರಡಿಸಿದ್ದಾರೆ.

Last Updated : Jul 9, 2021, 9:36 PM IST

ABOUT THE AUTHOR

...view details