ಕೊಡಗು: ವಿಶ್ವವನ್ನೇ ಕಾಡುತ್ತಿರುವ ಮಹಾಮಾರಿ ಕೋವಿಡ್‍ಗೆ ಲಸಿಕೆ ಲಭ್ಯ ಆಗೋವರೆಗೆ ಕೊಡಗು ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಕೊಡಗು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಕೋವಿಡ್ ಲಸಿಕೆ ಲಭ್ಯ ಆಗುವವರೆಗೆ ಶಾಲೆ ಬಂದ್: ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ..! - Kodagu ZP General Meeting
ಕೊಡಗು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕೋವಿಡ್ ಲಸಿಕೆ ಲಭ್ಯ ಆಗುವವರೆಗೆ ಶಾಲೆಯನ್ನು ತೆರೆಯದಂತೆ ನಿರ್ಣಯ ಕೈಗೊಳ್ಳಲಾಗಿದೆ.
ಕೊಡಗು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ ಹರೀಶ್ ಅವರ ಅಧ್ಯಕ್ಷತೆಯಲ್ಲಿ ಇಂದು ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದ ಜಿಲ್ಲಾ ಪಂಚಾಯಿತಿ ಸದಸ್ಯರು ಲಸಿಕೆ ಲಭ್ಯವಾಗೋವರೆಗೆ ಶಾಲೆಯನ್ನು ತೆರೆಯದಂತೆ ನಿರ್ಣಯಿಸಿದೆ. ಈ ನಿರ್ಣಯವನ್ನು ಸರ್ಕಾರಕ್ಕೂ ಕಳುಹಿಸಲು ನಿರ್ಧರಿಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಆದರೂ ಜಿಲ್ಲೆಯಲ್ಲಿ ಚಳಿಗಾಲ ಆರಂಭವಾದ ಮೇಲೆ ಮೈಕೊರೆಯುವ ಚಳಿ ಇದ್ದು, ವಾತಾವರಣದಲ್ಲಿ ತೀವ್ರ ಶೀತಾಂಶವಿದೆ. ಒಂದು ವೇಳೆ ಸರ್ಕಾರ ನಿರ್ಧರಿಸಿ ಶಾಲೆ ಆರಂಭಿಸಿದರೂ ಇಲ್ಲಿನ ವಾತಾವರಣ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಈ ದೃಷ್ಟಿಯಿಂದ ಕೋವಿಡ್‍ಗೆ ಲಸಿಕೆ ಲಭ್ಯವಾಗುವವರೆಗೆ ಯಾವುದೇ ಕಾರಣಕ್ಕೂ ಜಿಲ್ಲೆಯ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ನಿರ್ಣಯ ಕೈಗೊಂಡಿದೆ.