ಕೊಡಗು: ಯುವ ಸಮೂಹ ಹೊಸ ವರ್ಷವನ್ನು ಸ್ವಾಗತಿಸುವ ಉತ್ಸಾಹದಲ್ಲಿದೆ. ಜಿಲ್ಲೆಯ ಪ್ರವಾಸಿತಾಣಗಳು, ರೆಸಾರ್ಟ್ ಹಾಗೂ ಹೋಂ ಸ್ಟೇಗಳತ್ತ ಯುವಕರು ಮುಖ ಮಾಡುತ್ತಾರೆ. ಆದರೆ ಈ ಬಾರಿ ಪ್ರವಾಸಿತಾಣಗಳಿಗೆ ಹೋಗುವ ಮೊದಲು ಜಿಲ್ಲಾಡಳಿತ ಕೆಲವು ರೂಲ್ಸ್‌ಗಳನ್ನು ಪಾಲಿಸುವಂತೆ ಆದೇಶಿಸಿದೆ.
ಹೋಂಸ್ಟೆ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಅನಂತಶಯನ ಪ್ರತಿಕ್ರಿಯೆ ರೆಸಾರ್ಟ್ಗಳಲ್ಲಿ ನವಜೋಡಿಗೆ ಮಾತ್ರ ಅವಕಾಶ
ಕೊರೊನಾ ಬಳಿಕ ದೈನಂದಿನ ಬದುಕಿನಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್‌ಗಳನ್ನು ಧರಿಸುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆ ಹೊಸ ವರ್ಷದ ಆಚರಣೆಗೆ ಹೋಂಸ್ಟೆ, ರೆಸಾರ್ಟ್ ಮಾಲೀಕರು ಒಂದಿಷ್ಟು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಮಾಡಿಕೊಂಡಿದ್ದಾರೆ. ಹೊಸ ವರ್ಷಕ್ಕೆ ಆಗಮಿಸುವ ಅತಿಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯಗೊಳಿಸಿದ್ದಾರೆ. ಅಲ್ಲದೆ ನವ ಜೋಡಿಗಳು ಹಾಗೂ ಕುಟುಂಬಸ್ಥರಿಗೆ ಮಾತ್ರ ಈ ಬಾರಿ ಅವಕಾಶ ಮಾಡಿಕೊಡಲಾಗಿದೆ. ಅಬ್ಬರದ ಧ್ವನಿವರ್ಧಕಗಳಿಲ್ಲದೆ ಅತ್ಯಂತ ಸರಳವಾಗಿ ಹೊಸ ವರ್ಷವನ್ನು ಸ್ವಾಗತಿಸಲು ಅನುಮತಿಸಲಾಗಿದೆ.
ಓದಿ:ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ಜೆಡಿಎಸ್ ವಿರೋಧ: ದೇವೇಗೌಡ
ಈಗಾಗಲೇ ಪ್ರವಾಸಿತಾಣಗಳಿಗೆ ಆಗಮಿಸುತ್ತಿರುವ ಪ್ರವಾಸಿಗರಲ್ಲಿ ಹಲವರು ಮಾಸ್ಕ್ ಧರಿಸದಿರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಟಾಸ್ಕ್ ಪೋಸ್೯ ತಂಡ ರಚಿಸಿ ದಂಡ ವಿಧಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.