ಕೊಡಗು:ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ಅಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆಯಲಾಗಿದೆ. ಕೊಡಗು ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ಮಂಜುನಾಥ್ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಲಾಗಿದೆ.
ಮಡಿಕೇರಿಯ ಶಿಶು ಕಲ್ಯಾಣ ಸಂಸ್ಥೆ ಕಟ್ಟಡದಲ್ಲಿರುವ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದೆ ಎಂಬ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.