ಕರ್ನಾಟಕ

karnataka

ಕೊಡಗಿನಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 21ಕ್ಕೆ ಏರಿಕೆ

By

Published : Aug 30, 2020, 3:11 PM IST

ಮಹಾಮಾರಿ ಕೊರೊನಾಗೆ ಕೊಡಗು ಜಿಲ್ಲೆಯಲ್ಲಿ ನಿನ್ನೆ ರಾತ್ರಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

Kodagu
Kodagu

ಕೊಡಗು: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬರು ಮೃತಪಟ್ಟಿರುವ ಘಟನೆ‌ ಮಡಿಕೇರಿಯ ಎಫ್ಎಂಸಿ ಕಾಲೇಜಿನ‌‌ ಸಮೀಪ ನಡೆದಿದೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 21 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.‌ ರಾತ್ರಿ 64 ವರ್ಷದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇವರು ಅಧಿಕ ರಕ್ತದೊತ್ತಡ ಹಾಗೂ ಗ್ಯಾಂಗ್ರಿನ್‌ನಿಂದ ಬಳಲುತ್ತಿದ್ದರು.‌

ಆಗಸ್ಟ್ 28 ರಂದು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 29 ರಂದು ಆಸ್ಪತ್ರೆಗೆ‌ ದಾಖಲಿಸಲಾಗಿತ್ತು. ಅಲ್ಲದೆ ಅಂದೇ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು.

ABOUT THE AUTHOR

...view details