ಕೊಡಗು:ಮಂಜಿನ ನಗರಿ ಮಡಿಕೇರಿಯ ಹಲವು ದಿನಗಳ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ಅಭಿಯಾನಕ್ಕೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೊಡವ ಭಾಷೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಆಸ್ಪತ್ರೆ ಅಭಿಯಾನಕ್ಕೆ ಸ್ಪಂದನೆ: ಕೊಡವ ಭಾಷೆಯಲ್ಲೇ ಟ್ವೀಟ್ ಮಾಡಿದ ರಾಮುಲು - ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್
ಮಂಜಿನ ನಗರಿ ಮಡಿಕೇರಿಯ ಹಲವು ದಿನಗಳ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್‌ಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಕೊಡವ ಭಾಷೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸಚಿವ ಶ್ರೀ ರಾಮುಲು
ಕೊಡಗಿನ ಜನರ ವಿ ನೀಡ್ ಎಮರ್ಜೆನ್ಸಿ ಹಾಸ್ಪಿಟಲ್ ಇನ್ ಕೊಡಗು ಎಂಬ ಟ್ವಿಟರ್ ಅಭಿಯಾನಕ್ಕೆ ಶ್ರೀರಾಮುಲು, ಕೊಡವ ನಾಡ್‌ರ ಜನಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೂತ್ ಕೇಟಿತುಳ್ಳ ಎಂದು ಟ್ವಿಟರ್ ಮೂಲಕ ಕೊಡವ ಭಾಷೆಯಲ್ಲಿ ಸ್ಪಂದಿಸಿರುವುದು ಮೆಚ್ಚುಗೆಗೆ ಕಾರಣವಾಗಿದೆ.
ಸಚಿವರ ತತ್ಕ್ಷಣದ ಟ್ವೀಟ್ ಸ್ಪಂಧನೆಗೆ ನೆಟ್ಟಿಗರಿಂದ ಶ್ಲಾಘನೆಗಳ ಮಹಾಪೂರವೇ ಹರಿದು ಬಂದಿದೆ.