ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆ ಮೆರೆದಿದ್ದ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
ವೃತ್ತಿ ಬದ್ಧತೆ ಪ್ರದರ್ಶಿಸಿದ್ದ ಶಿಕ್ಷಕಿಗೆ ಶಿಕ್ಷಣ ಸಚಿವರ ಅಭಿನಂದನೆ..! - ವೃತ್ತಿ ಬದ್ದತೆ ಪ್ರದರ್ಶಿಸಿದ್ದ ಶಿಕ್ಷಕಿಗೆ ಶಿಕ್ಷಣ ಸಚಿವರಿಂದ ಅಭಿನಂದನೆ
ವೃತ್ತಿ ಬದ್ಧತೆ ಮೆರೆದಿದ್ದ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವು ನುಂಗಿಕೊಂಡು ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ ತಾಲೂಕಿನ ಶಿಕ್ಷಕಿ ಶ್ರೀಮತಿ ಕವಿತಾರಿಗೆ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದಗಳು. ಇವರು ಕೇವಲ ಶಿಕ್ಷಕಿ ಮಾತ್ರವಲ್ಲ, ಎಸ್‌ಎಸ್‌ಎಲ್‌ಸಿ ಮಕ್ಕಳ ತಾಯಿಯೂ ಹೌದು ಎಂದು ತೋರಿದ್ದಾರೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿನ್ನೆ ತಾಯಿ ಮೃತಪಟ್ಟಿದ್ದರೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯ ಮಾಪನಕ್ಕೆ ಹಾಜರಾಗುವ ಮೂಲಕ ಶಿಕ್ಷಕಿಯೊಬ್ಬರು ವೃತ್ತಿ ಬದ್ಧತೆ ತೋರಿದ್ದರು.