ಕರ್ನಾಟಕ

karnataka

ETV Bharat / state

ಕೊಡಗು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಪ್ಪಚ್ಚು ರಂಜನ್​​ - undefined

ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಗಸ್ಟ್ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದ್ದು, ಶೀಘ್ರ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಪ್ಪಚ್ಚು ರಂಜನ್

By

Published : Jun 28, 2019, 11:01 PM IST

ಕೊಡಗು: ಕಳೆದ ರಾಜ್ಯ ಬಜೆಟ್​ನಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಯನ್ನು 400 ಬೆಡ್​ಗಳಿಗೆ ಮೇಲ್ದರ್ಜೆಗೆ ಏರಿಸಲು 100 ಕೋಟಿ ರೂ. ಘೋಷಿಸಲಾಗಿತ್ತು. ಹಾಗಾಗಿ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆ ಕಟ್ಟಡವನ್ನು ಮತ್ತಷ್ಟು ವಿಸ್ತರಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ನೀಲನಕ್ಷೆಯನ್ನು ಪರಿಶೀಲಿಸಿದರು. ಆಸ್ಪತ್ರೆಗೆ ನೂತನ ಕಟ್ಟಡದ ಅಗತ್ಯವಿದ್ದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸುವುದಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಪ್ಪಚ್ಚು ರಂಜನ್

ಆಗಸ್ಟ್ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದ್ದು, ಶೀಘ್ರ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿದರು. ಅಲ್ಲದೆ ಕೊಡಗಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಕುರಿತು ಸಿಎಂ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

For All Latest Updates

TAGGED:

ABOUT THE AUTHOR

...view details