ಕರ್ನಾಟಕ

karnataka

ETV Bharat / state

ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ, ಪರಿಶೀಲನೆ

ಮಾಸ್ಕ್ ಅನ್ನು ಸರಿಯಾಗಿ ಧರಿಸಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು. ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಕೊರೊನಾ ನಿರ್ಮೂಲನೆ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ಪರಿಶೀಲನೆ
ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ಪರಿಶೀಲನೆ

By

Published : Apr 27, 2021, 7:44 AM IST

ಕೊಡಗು:ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ ನೀಡಿ ವಾರ್ಡ್‍ಗಳನ್ನು ಪರಿಶೀಲಿಸಿ ಸೋಂಕಿತ ರೋಗಿಗಳೊಂದಿಗೆ ಮಾತುಕತೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳಿವೆ. ಕೆಲವು ಸಣ್ಣಪುಟ್ಟ ಲೋಪಗಳನ್ನೇ ದೊಡ್ಡದು ಮಾಡಿ ಹೇಳುವುದು ಸರಿಯಲ್ಲ. ಇದರಿಂದಾಗಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಮಾನಸಿಕ ಸ್ಥೈರ್ಯದ ಮೇಲೆ ಪರಿಣಾಮ ಬೀರುತ್ತದೆ. ಅವರೂ ಕೂಡ ಸಂಸಾರ ಹೊಂದಿದವರೇ, ಸೋಂಕಿತರನ್ನು ಗುಣಮುಖವಾಗಿಸಲು ಹಗಲು ರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಂತವರ ಮೇಲೆ ಅನಗತ್ಯ ದೂರು ಹೇಳಬಾರದು ಎಂದರು.

ವಾರ್ಡ್‍ನಲ್ಲಿರುವವರೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ, ಸೌಲಭ್ಯಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಶುಶ್ರೂಷೆ ಚೆನ್ನಾಗಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ 250 ಹಾಸಿಗೆಗಳು ಕೋವಿಡ್ ಆಸ್ಪತ್ರೆಯಲ್ಲಿದೆ. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಬೇರೆ ಕಡೆ ಹೋಲಿಸಿದರೆ ಉತ್ತಮ ಚಿಕಿತ್ಸೆ ಲಭ್ಯವಿದೆ. ಅಪಪ್ರಚಾರಗಳಿಗೆ ಕಿವಿಗೊಡದೇ ರೋಗ ಲಕ್ಷಣಗಳಿದ್ದಲ್ಲಿ ಕೂಡಲೇ ಆಸ್ಪತ್ರೆಗೆ ಬರಬೇಕು ಎಂದು ಶಾಸಕರು ಮನವಿ ಮಾಡಿದರು.

ಇದನ್ನೂ ಓದಿ: ಮಕ್ಕಳಿಗಾಗಿ ಹೊಸ ಕನ್ನಡ ಚಾನಲ್​: ಇಂದಿನಿಂದ ನಿಮ್ಮ ಮನೆಯಂಗಳಕ್ಕೆ 'ಈಟಿವಿ ಬಾಲ ಭಾರತ'

ABOUT THE AUTHOR

...view details