ಕರ್ನಾಟಕ

karnataka

ETV Bharat / state

ಕೊಡಗು ಗಡಿಯ ಕರಿಕೆ ಚೆಕ್‌ಪೋಸ್ಟ್​ಗೆ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಭೇಟಿ - MLC Sunil Subramani visit Kodagu border check post

ಮಡಿಕೇರಿ ತಾಲೂಕಿನ ಬೆಟ್ಟಗೇರಿ, ಬೇಂಗೂರು, ಕುಂದಚೇರಿ, ಭಾಗಮಂಡಲ, ಅಯ್ಯಂಗೇರಿ, ಬಲ್ಲಮಾವಟಿ, ಎಮ್ಮೆಮಾಡು, ಕಕ್ಕಬ್ಬೆ, ಪಾರಾಣೆ, ನಾಪೋಕ್ಲು, ಹೊದ್ದೂರು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪಂಚಾಯಿತಿಯ ಅಧ್ಯಕ್ಷರು, ಪಿಡಿಒ ಹಾಗೂ ಸದಸ್ಯರೊಂದಿಗೆ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಕರಿಕೆ ಚೆಕ್‌ಪೋಸ್ಟ್​ಗೆ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಭೇಟಿ
ಕರಿಕೆ ಚೆಕ್‌ಪೋಸ್ಟ್​ಗೆ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಭೇಟಿ

By

Published : Jun 3, 2021, 12:41 AM IST

ಕೊಡಗು: ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ ತಾಲೂಕಿನ ಗಡಿ ಗ್ರಾಮ ಕರಿಕೆಯ ಚೆಕ್‌ಪೋಸ್ಟ್​ಗೆ ಭೇಟಿ ನೀಡಿ ಪರಿಶೀಲಿಸಿದರು. ಕರ್ನಾಟಕ-ಕೇರಳ ಗಡಿಯಲ್ಲಿ ವಾಹನಗಳ ಸಂಚಾರದ ಬಗ್ಗೆ ಅಲ್ಲಿನ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಇದೇ ಸಂದರ್ಭ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು. ತಾಲೂಕಿನ ಕರಿಕೆ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು. ಚೇರಂಬಾಣೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿರುವ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವೈದ್ಯಕೀಯ ಸಿಬ್ಬಂದಿಗಳೊAದಿಗೆ ಚರ್ಚಿಸಿದರು.

ಮಡಿಕೇರಿ ತಾಲೂಕಿನ ಬೆಟ್ಟಗೇರಿ, ಬೇಂಗೂರು, ಕುಂದಚೇರಿ, ಭಾಗಮಂಡಲ, ಅಯ್ಯಂಗೇರಿ, ಬಲ್ಲಮಾವಟಿ, ಎಮ್ಮೆಮಾಡು, ಕಕ್ಕಬ್ಬೆ, ಪಾರಾಣೆ, ನಾಪೋಕ್ಲು, ಹೊದ್ದೂರು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪಂಚಾಯಿತಿಯ ಅಧ್ಯಕ್ಷರು, ಪಿಡಿಒ ಹಾಗೂ ಸದಸ್ಯರೊಂದಿಗೆ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಗ್ರಾಮಗಳಲ್ಲಿ ಕೊರೊನಾ ಆದಷ್ಟು ಸೋಂಕು ಇಳಿಮುಖವಾಗಲು ಪಂಚಾಯಿತಿಯವರು ಕೆಲಸ ಮಾಡಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ABOUT THE AUTHOR

...view details