ಕೊಡಗು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿದ್ದವರಿಗೆ ಮೊಬಿಯಸ್ ಫೌಂಡೇಶನ್ ಸ್ಪಂದಿಸಿದೆ. ಪಿಎಂ ಕೇರ್ಸ್ ನಿಧಿಗೆ ಅಂದಾಜು ₹1 ಕೋಟಿ ಮೌಲ್ಯದ ಅಗತ್ಯ ವಸ್ತುಗಳನ್ನು ಪೂರೈಸಿ ಮಾನವೀಯತೆ ಮೆರೆದಿದೆ.
ಜಿಲ್ಲಾಡಳಿತಕ್ಕೆ 1 ಕೋಟಿ ಮೌಲ್ಯದ ಅಗತ್ಯ ವಸ್ತುಗಳನ್ನು ನೀಡಿದ ಮೊಬಿಯಸ್ ಸಂಸ್ಥೆ.. - corona news
ಮೊಬಿಯಸ್ ಫೌಂಡೇಶನ್‌ನಿಂದ ಜಿಲ್ಲಾ ಆಸ್ಪತ್ರೆಗೆ ವೆಂಟಿಲೇಟರ್‌ಗಳು, 300 ಮಾಸ್ಕ್‌ಗಳು ಮತ್ತು 200 ವೈಯಕ್ತಿಕ ಸಂರಕ್ಷಣಾ ಸಾಧನಗಳು ಮತ್ತು ಕಾರ್ಮಿಕರಿಗೆ ಅಗತ್ಯವಾದ ಅಡುಗೆ ಎಣ್ಣೆ ಹಾಗೂ ಬೆಳೆಯನ್ನು ಜಿಲ್ಲಾಡಳಿತದ ಮೂಲಕ ವಿತರಿಸಲಾಯಿತು.
ಕೊರೊನಾ ಭೀತಿಯಿಂದ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿರುವುದರಿಂದ ಕೂಲಿ ಕಾರ್ಮಿಕರು ಹಾಗೂ ದಿನಗೂಲಿ ನೌಕರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಸಾಮಾನ್ಯ ಅಗತ್ಯ ವೈದ್ಯಕೀಯ ಸಾಧನಗಳಿಗೂ ಸಮಸ್ಯೆ ಎದುರಾಗಿದೆ. ಆದ್ದರಿಂದ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಫೌಂಡೇಶನ್‌ನಿಂದ ಜಿಲ್ಲಾ ಆಸ್ಪತ್ರೆಗೆ ವೆಂಟಿಲೇಟರ್‌ಗಳು, 300 ಮಾಸ್ಕ್ ಮತ್ತು 200 ವೈಯಕ್ತಿಕ ಸಂರಕ್ಷಣಾ ಸಾಧನಗಳು ಮತ್ತು ಕಾರ್ಮಿಕರಿಗೆ ಅಗತ್ಯದ ಅಡುಗೆ ಎಣ್ಣೆ ಹಾಗೂ ಬೆಳೆಯನ್ನು ಜಿಲ್ಲಾಡಳಿತದ ಮೂಲಕ ವಿತರಿಸಿದರು.
ಇದೇ ವೇಳೆ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ ಪನ್ನೇಕರ್ ಹಾಗೂ ಇತರರು ಇದ್ದರು.