ಕೊಡಗು: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗುಂಡೇಟಿಗೆ ಇಬ್ಬರು ಬಲಿಯಾದ ಪರಿಣಾಮ ಮಡಿಕೇರಿ ನಗರದಲ್ಲಿ ಇಂದು ಸ್ವಯಂಪ್ರೇರಿತ ಬಂದ್ ಆಚರಿಸಲಾಗುತ್ತಿದೆ.
ಮಡಿಕೇರಿಯಲ್ಲಿ ಸ್ವಯಂಪ್ರೇರಿತ ಬಂದ್: ಮುಸ್ಲಿಂ ವ್ಯಾಪಾರಸ್ಥರಿಂದ ಶಾಂತಿಯುತ ಪ್ರತಿಭಟನೆ
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗುಂಡೇಟಿಗೆ ಇಬ್ಬರು ಬಲಿಯಾದ ಹಿನ್ನೆಲೆಯಲ್ಲಿ ಮಡಿಕೇರಿ ನಗರದಲ್ಲಿ ಇಂದು ಸ್ವಯಂಪ್ರೇರಿತ ಬಂದ್ ಆಚರಿಸಲಾಗುತ್ತಿದೆ.
ಮಡಿಕೇರಿಯಲ್ಲಿ ಸ್ವಯಂ ಪ್ರೇರಿತ ಬಂದ್: ಮುಸ್ಲಿಂ ವ್ಯಾಪರಸ್ಥರಿಂದ ಶಾಂತಿಯುತ ಪ್ರತಿಭಟನೆ
ಪೊಲೀಸರ ಗೋಲಿಬಾರ್ ಖಂಡಿಸಿ ಮುಸ್ಲಿಂ ವ್ಯಾಪಾರಸ್ಥರು ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಬಂದ್ ನಡೆಸುತ್ತಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೂ ಮಾರ್ಕೆಟ್, ಮಹದೇವ ಪೇಟೆ, ಇಂದಿರಾಗಾಂಧಿ ಸರ್ಕಲ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ರಸ್ತೆಗಳಲ್ಲಿ ಸಾರ್ವಜನಿಕರ ಓಡಾಟ ಕಡಿಮೆಯಾಗಿತ್ತು.