ನಾಪೋಕ್ಲು/ಮಡಿಕೇರಿ:ಮಡಿಕೇರಿ ತಾಲೂಕಿನ ನಾಪೋಕ್ಲು-ಪಾರಾಣೆ ಸಂಪರ್ಕ ರಸ್ತೆ ದುಸ್ಥಿತಿ ಬಗ್ಗೆ ಈಟಿವಿ ಭಾರತ ವರದಿ ಬಳಿಕ ಎಚ್ಚೆತ್ತ ಗುತ್ತಿಗೆದಾರರು ಕೆಲಸವನ್ನು ಕೈಗೆತ್ತಿಕೊಂಡಿದ್ದಾರೆ.
ನಾಪೋಕ್ಲು ಮಾರ್ಗವಾಗಿ ವಿರಾಜಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ಸ್ಥಳೀಯ ಗುತ್ತಿಗೆದಾರರ ಅವೈಜ್ಞಾನಿಕ ಕೆಲಸದಿಂದ ಗುಂಡಿಗಳು ಬಿದ್ದಿದ್ದು, ಇದರಿಂದ ಪ್ರತಿನಿತ್ಯ ವಾಹನ ಸವಾರರು ಗುಂಡಿ ಬಿದ್ದಿರುವ ರಸ್ತೆಗಳಲ್ಲೇ ಪ್ರಯಾಸದಿಂದ ಸಂಚರಿಸುತ್ತಿದ್ದರು. ಈ ಬಗ್ಗೆ ಈಟಿವಿ ಭಾರತ ''ಗುತ್ತಿಗೆದಾರರ ನಿರ್ಲಕ್ಷ್ಯ ಆರೋಪ... ಹದಗೆಟ್ಟ ರಸ್ತೆಯಿಂದ ಸ್ಥಳೀಯರ ಆಕ್ರೋಶ'' ಎಂಬಶೀರ್ಷಿಕೆಯಡಿ ವಿಸ್ತೃತ ವರದಿ ಮಾಡಿತ್ತು. ಈ ಹಿನ್ನೆಲೆ ಎಚ್ಚೆತ್ತುಕೊಂಡ ಗುತ್ತಿಗೆದಾರರು ಜೆಸಿಬಿ ಮೂಲಕ ಸೇತುವೆ ಇಕ್ಕೆಲಗಳಲ್ಲಿ ಮಣ್ಣು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಿದ್ದಾರೆ.