ವಿರಾಜಪೇಟೆ (ಕೊಡಗು):ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಸಿಲುಕಿದ್ದ 83 ಜನರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಪ್ರವಾಹದಲ್ಲಿ ಸಿಲುಕಿದ್ದ 83 ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್ ಸಿಬ್ಬಂದಿ - kodagu flood news
ಪ್ರವಾಹದಲ್ಲಿ ಸಿಲುಕಿದ್ದ ವಿರಾಜಪೇಟೆ ತಾಲೂಕಿನ 83 ಜನರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಪ್ರವಾಹದಲ್ಲಿ ಸಿಲುಕಿದ್ದ 83 ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್ ಸಿಬ್ಬಂದಿ
ಪ್ರವಾಹದಲ್ಲಿ ಸಿಲುಕಿದ್ದ ವಿರಾಜಪೇಟೆ ತಾಲೂಕಿನ ಕೊಟ್ಟಮುಡಿ ಹಾಗೂ ಹೊದವಾಡ ಗ್ರಾಮಗಳ ಜನರನ್ನು ರಕ್ಷಿಸಿದ್ದಾರೆ. ಅಲ್ಲದೆ, ಬಲಮುರಿಯಲ್ಲಿ ಸಿಲುಕಿದ್ದ ವೃದ್ಧ ಮತ್ತು ಬಾಲಕ ಸೇರಿದಂತೆ ಪ್ರವಾಹದ ನೀರು ಹೆಚ್ಚಿದ್ದರಿಂದ ಮನೆಯ ಎರಡನೇ ಮಹಡಿಯಲ್ಲಿ ಕುಳಿತಿದ್ದವರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ಬೋಟ್ ಮೂಲಕ ಸುರಕ್ಷಿತವಾಗಿ ಕರೆತಂದಿದ್ದಾರೆ.
ಈಗಾಗಲೇ ಬ್ರಹ್ಮಗಿರಿ, ಪುಷ್ಪಗಿರಿ, ತಲಕಾವೇರಿ, ಭಾಗಮಂಡಲ ಮತ್ತು ವಿರಾಜಪೇಟೆ ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದೆ.