ಕೊಡಗು:ಚಿಕ್ಕಮಗಳೂರಿನ ರೆಸಾರ್ಟ್‌ನಲ್ಲಿ ನಡೆದ ಆರ್.ಅಶೋಕ್ ಮತ್ತು ಜಗದೀಶ್ ಶೆಟ್ಟರ್ ಗುಪ್ತ ಸಭೆ ವಿಚಾರಕ್ಕೆ ಸಂಬಂಧಿಸಿ ಸಹಕಾರ ಸಚಿವ ಸೋಮಶೇಖರ್ ಪ್ರತಿಕ್ರಿಯಿಸಿದ್ದಾರೆ.
ಶೆಟ್ಟರ್-ಅಶೋಕ್ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ: ಸಚಿವ ಸೋಮಶೇಖರ್ - Jagadish Shettar secret meeting
ಚಿಕ್ಕಮಗಳೂರಿನ ರೆಸಾರ್ಟ್‌ನಲ್ಲಿ ನಡೆದ ಆರ್.ಅಶೋಕ್ ಮತ್ತು ಜಗದೀಶ್ ಶೆಟ್ಟರ್ ಗುಪ್ತ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಸೋಮಶೇಖರ್ ಪ್ರತಿಕ್ರಿಯಿಸಿ, ಅವರಿಬ್ಬರ ಸಭೆಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಭೂಮಿ ವಿಚಾರವಾಗಿ ಅವರು ಸಭೆ ಸೇರಿದ್ದಾರೆ ಅಷ್ಟೇ ಎಂದರು.
ಅವರಿಬ್ಬರ ಭೇಟಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಚಿವ ಎಸ್. ಟಿ. ಸೋಮಶೇಖರ್
ಅವರ ಸಭೆಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಭೂಮಿ ವಿಚಾರವಾಗಿ ಅವರು ಸಭೆ ಸೇರಿದ್ದಾರೆ ಅಷ್ಟೇ ಎಂದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರತಿಜ್ಞಾ ವಿಧಿ ಸ್ವೀಕಾರ ಕುರಿತು ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ಈ ಕಾರ್ಯಕ್ರಮ ಮಾಡಬಾರದಿತ್ತು. ಮಾಡಿದ್ದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.