ಕೊಡಗು :ಇತ್ತೀಚೆಗಷ್ಟೆ ಕಾಡಾನೆ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಸಿಬ್ಬಂದಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕೊಡಗಿನಲ್ಲಿ ಕಾಡಾನೆ ದಾಳಿ: ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಸಾವು - kodagu elephant attack
ಕಾಡಾನೆ ದಾಳಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಡಿಕೇರಿ ಡಿಎಆರ್ ಘಟಕದ ಪೊಲೀಸ್ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ರು.
ಡಿಎಆರ್ ಚನ್ನಕೇಶವ
ಸೆಪ್ಟೆಂಬರ್ 3 ರಂದು ಕಡಗದಾಳು ವೈರ್‌ಲೆಸ್ ಘಟಕದಲ್ಲಿ ರಾತ್ರಿ ವೇಳೆ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಚನ್ನಕೇಶವ ಮೇಲೆ ಒಂಟಿ ಸಲಗ ದಾಳಿ ನಡೆಸಿ ಎದೆ ಭಾಗಕ್ಕೆ ತುಳಿದಿತ್ತು. ತೀವ್ರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲ ನೀಡಲಿಲ್ಲ. ಹೀಗಾಗಿ ಕಳೆದ ರಾತ್ರಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಮಡಿಕೇರಿ ಡಿಎಆರ್ ಘಟಕದಲ್ಲಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.