ಕೊಡಗು: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ವೃದ್ಧ ಮೃತಪಟ್ಟಿದ್ದು, ಈ ಮೂಲಕ ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಮೃತರ ವಿವರ:
ಕೊಡಗು: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ವೃದ್ಧ ಮೃತಪಟ್ಟಿದ್ದು, ಈ ಮೂಲಕ ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಮೃತರ ವಿವರ:
70 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದು, ಇವರು ಕಳೆದ 15 ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ್ವರ ಕಡಿಮೆ ಆಗದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ದೃಢಪಟ್ಟಿದೆ.
ಆಗಸ್ಟ್. 30 ರಂದು ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರೆ.