ಕೊಡಗು: ರಾಜ್ಯದಲ್ಲಿ ದಿನೇದಿನೇ ಕೋವಿಡ್ ಅಬ್ಬರ ಹೆಚ್ಚಾಗುತ್ತಿದೆ. ನಿನ್ನೆಯಷ್ಟೇ ವಾಂತಿ, ಭೇದಿಯೆಂದು ಆಸ್ಪತ್ರೆ ಸೇರಿದ್ದ 65 ವರ್ಷದ ವೃದ್ಧೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸೋಮವಾರಪೇಟೆಯಲ್ಲಿ ನಡೆದಿದೆ.
ಕೊಡಗಿನಲ್ಲಿ ಕೋವಿಡ್ ಸೋಂಕಿಗೆ ವೃದ್ಧೆ ಬಲಿ - Corona
ವಾಂತಿ, ಭೇದಿಯೆಂದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಇವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ.
Dead
ನಿನ್ನೆಗಿಂತಲೂ ಇಂದು ವೃದ್ಧೆಯ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಬೇರೆ ಆಸ್ಪತ್ರೆಗೆ ಸಾಗಿಸಲು ಸಿದ್ಧತೆ ನಡೆಸಲಾಗುತ್ತಿತ್ತು. ಆದರೆ ಇಂದು ಮಧ್ಯಾಹ್ನವೇ ವೈರಸ್‌ಗೆ ಬಲಿಯಾಗಿದ್ದಾರೆ.
ಕೋವಿಡ್ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ನಡೆದಿದೆ ಎಂದು ತಿಳಿದುಬಂದಿದೆ.