ಕೊಡಗು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಒಮಿಕ್ರಾನ್ ಆತಂಕ ಮೂಡಿದೆ. ಇದರ ಬೆನ್ನಲ್ಲೇ ಶುಕ್ರವಾರ ಮಡಿಕೇರಿಯ ಎಫ್ ಎಂ ಸಿ ಕಾಲೇಜಿನಲ್ಲಿ ಒಂದು ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ವಿದ್ಯಾರ್ಥಿಗಳಲ್ಲಿ ಭಯ ಶುರುವಾಗಿದೆ.
ಮಡಿಕೇರಿಯ ಎಫ್ಎಂಸಿ ಕಾಲೇಜಿನಲ್ಲಿ 1 ಕೋವಿಡ್ ಕೇಸ್ ಪತ್ತೆ
ಮಡಿಕೇರಿಯ ಎಫ್ ಎಂ ಸಿ ಕಾಲೇಜಿನಲ್ಲಿ ಒಂದು ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಉಂಟುಮಾಡಿದೆ.
ಕೋವಿಡ್ ಕೇಸ್ ಪತ್ತೆಯಾದ ಹಿನ್ನೆಲೆ ಕಾಲೇಜಿನ 178 ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಕಾಲೇಜ್ ಸಿಬ್ಬಂದಿ ಮತ್ತು ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದವರನ್ನು ಟೆಸ್ಟ್ ಮಾಡಲಾಗುತ್ತಿದೆ. ರೋಗದ ಗುಣಲಕ್ಷಣಗಳು ಕಂಡುಬಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಪ್ರತ್ಯೇಕಿಸಲು ವೈದ್ಯರು ಸಲಹೆ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಸದ್ಯಕ್ಕೆ 35,749 ಸಕ್ರಿಯ ಪ್ರಕರಣಗಳಿವೆ. ಜೊತೆಗೆ ನೆರೆಯ ಕೇರಳ ರಾಜ್ಯದಿಂದ ಆಗಮಿಸುವ ವಿದ್ಯಾರ್ಥಿಗಳ ಮೇಲೂ ಅರೋಗ್ಯ ಇಲಾಖೆ ಹೆಚ್ಚಿನ ಗಮನ ಹರಿಸಿದೆ. ಜಿಲ್ಲೆಯ ಗಡಿಭಾಗದಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಪ್ರತಿಯೊಬ್ಬರನ್ನು ತಪಾಸಣೆ ನಡೆಸುತ್ತಿದ್ದಾರೆ.