ಕೊಡಗು: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದು, ಈ ಮೂಲಕ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಕೊಡಗಿನಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 29ಕ್ಕೆ ಏರಿಕೆ - Corona death update news
ಕೊಡಗಿನಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತ ಮೃತರ ಅಂತ್ಯಕ್ರಿಯೆ ನಡೆಸಲಿದೆ.
ಕೊಡಗು
ಮಡಿಕೇರಿ ತಾಲೂಕಿನ ಹೊದವಾಡ ಗ್ರಾಮದ 58 ವರ್ಷದ ವ್ಯಕ್ತಿ ಇಂದು ಚಿಕಿತ್ಸೆ ಫಲಸದೆ ಮೃತಪಟ್ಟಿದ್ದಾರೆ. ಆಗಸ್ಟ್ 14 ರಂದು ಇವರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಪರೀಕ್ಷೆ ಬಳಿಕ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ನಂತರ ಅವರಿಗೆ ಕೋವಿಡ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.
ಇನ್ನು ಜಿಲ್ಲಾಡಳಿತ ಸರ್ಕಾರದ ಮಾರ್ಗಸೂಚಿಯಂತೆ ಮೃತರ ಅಂತ್ಯಕ್ರಿಯೆ ನಡೆಸಲಿದೆ ಎಂದು ತಿಳಿದುಬಂದಿದೆ.