ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್: ಅರ್ಧ ಶತಕದತ್ತ ಸೋಂಕಿತರ ಸಂಖ್ಯೆ..! - kodagu positive cases

ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದ 35 ವರ್ಷದ ನಿವಾಸಿಗೆ ಸೋಂಕು ದೃಢಪಟ್ಟಿದೆ. ಈತ ಸೌದಿ ಅರೇಬಿಯಾದಿಂದ ಹಿಂದಿರುಗಿದವನಾಗಿದ್ದು, ಬಂದ ತಕ್ಷಣ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವುದರಿಂದ ಯಾವುದೇ ಸಮಸ್ಯೆ ಇಲ್ಲವೆಂದು ಜಿಲ್ಲಾಡಳಿತ ಹೇಳಿದೆ.

corona possitive case in kodagu
ಕೊಡಗಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್

By

Published : Jun 30, 2020, 12:20 PM IST

ಕೊಡಗು: ಜಿಲ್ಲೆಯಲ್ಲಿ ಹೊಸದಾಗಿ ಒಂದು ಕೋವಿಡ್ ಪ್ರಕರಣ ವರದಿಯಾಗಿದ್ದು, ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದ 35 ವರ್ಷದ ನಿವಾಸಿಗೆ ಸೋಂಕು ದೃಢಪಟ್ಟಿದೆ.

ಈತ ಸೌದಿ ಅರೇಬಿಯಾದಿಂದ ಹಿಂದಿರುಗಿದವನಾಗಿದ್ದು, ಬಂದ ತಕ್ಷಣ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಜಿಲ್ಲಾಡಳಿತ ಹೇಳಿದೆ.

ಈ ಹಿಂದೆ ಸೋಂಕು ದೃಢಪಟ್ಟಿದ್ದ 32 ವರ್ಷದ ವ್ಯಕ್ತಿಯೊಬ್ಬ ಗೋಣಿಕೊಪ್ಪದ ಕೆ.ಇ.ಬಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ತಂಗಿದ್ದ ಕಾರಣ ಈ ಪ್ರದೇಶವನ್ನು ಸೀಲ್​ಡೌನ್​ ಮಾಡಲಾಗಿತ್ತು. ಇದೀಗ ನಿಯಂತ್ರಿತ ಈ ಪ್ರದೇಶವನ್ನು ತೆರೆಯಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 47 ಕ್ಕೇರಿದ್ದು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. 44 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 22 ಪ್ರದೇಶಗಳನ್ನು ಲಾಕ್​ಡೌನ್​ ಮಾಡಲಾಗಿದೆ.

ABOUT THE AUTHOR

...view details