ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಕೊರೊನಾಗೆ ಮತ್ತೊಂದು ಬಲಿ: 6ಕ್ಕೇರಿದ ಮೃತರ ಸಂಖ್ಯೆ - ಕೊಡಗಿನಲ್ಲಿ ಕೊರೊನಾ

ಕೊಡಗು ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಒಟ್ಟು 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೊಡಗಿನಲ್ಲಿ ಕೊರೊನಾ
ಕೊಡಗಿನಲ್ಲಿ ಕೊರೊನಾ

By

Published : Jul 30, 2020, 9:06 AM IST

ಕೊಡಗು:ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬ ಮೃತಪಟ್ಟಿದ್ದು, ಸೋ‌ಂಕಿಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಮಡಿಕೇರಿಯ 38 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಡಿಕೇರಿ ನಗರದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ವ್ಯಕ್ತಿ ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದರು. ಆ ಬಳಿಕ ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದ ಅವರು, ತೀವ್ರ ಜ್ವರದ ಹಿನ್ನೆಲೆಯಲ್ಲಿ ಜುಲೈ 26ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ABOUT THE AUTHOR

...view details