ಕೊಡಗು: ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ಸೆಪ್ಟೆಂಬರ್ 13 ರವರೆಗೆ ನಾಲ್ಕು ದಿನಗಳು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ: ಆರೆಂಜ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ..! - ಕೊಡಗಿನಲ್ಲಿ ಭಾರಿ ಮಳೆ ನ್ಯೂಸ್
ಕೊಡಗು ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್
ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಜಿಲ್ಲಾಡಳಿತ ಸೆಪ್ಟೆಂಬರ್ 9 ರಿಂದ 13 ರವರೆಗೆ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಒಂದು ವೇಳೆ ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾದರೆ ಜನತೆ ಜಿಲ್ಲಾಡಳಿತ ನೀಡಿರುವ ತುರ್ತು ದೂರವಾಣಿ 08272-221077 ಸಂಖ್ಯೆ ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.