ಕೊಡಗು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕೊಡಗಿನಲ್ಲಿ ಆರೆಂಜ್ ಅಲರ್ಟ್
ಪೂರ್ವ ಹಾಗೂ ಮಧ್ಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದಿದ ಪರಿಣಾಮ ಮೇ 31 ಹಾಗೂ ಜೂನ್ 1ರಂದು ಕೊಡಗು ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೊಷಿಸಿರುವ ಜಿಲ್ಲಾಡಳಿತವು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಕೊಡಗಿನಲ್ಲಿ ಆರೆಂಜ್ ಅಲರ್ಟ್
ಪೂರ್ವ ಹಾಗೂ ಮಧ್ಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದಿದ್ದು, ಪರಿಣಾಮ ಮೇ 31 ಹಾಗೂ ಜೂನ್ 1ರಂದು ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಗಾಳಿ ಸಹಿತ 115.60 ಮಿ.ಮೀ.ನಿಂದ 204.4 ಮಿ.ಮೀಟರ್ನಷ್ಟು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಜಿಲ್ಲಾಡಳಿತವು ಆರೆಂಜ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಮಳೆಯಿಂದ ಯಾವುದೇ ಸಮಸ್ಯೆಗಳು ಎದುರಾದರೆ ಜಿಲ್ಲಾಡಳಿತದ 08272-221077 ತುರ್ತು ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಮನವಿ ಮಾಡಿದ್ದಾರೆ.
Last Updated : May 31, 2020, 9:42 PM IST