ಕರ್ನಾಟಕ

karnataka

ETV Bharat / state

ಓವರ್ ಲೋಡ್ ಆಗಿದ್ದ ಪಿಕಪ್ ವಾಹನ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು..!

ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ಪಲ್ಟಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ಕೆದಕಲ್ ಸಮೀಪ ನಡೆದಿದ್ದು, ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

By

Published : Feb 28, 2020, 3:20 PM IST

Pick up Overturned
ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಪಿಕಪ್​​

ಕೊಡಗು:ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ಪಲ್ಟಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ಕೆದಕಲ್ ಸಮೀಪ ನಡೆದಿದ್ದು, ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಪಿಕಪ್​​

ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮಡಿಕೇರಿಯಿಂದ-ಸುಂಟಿಕೊಪ್ಪದ ಕಡೆಗೆ ತೆರಳುವ ವೇಳೆ ಈ ದುರ್ಘಟನೆ ನಡೆದಿದ್ದು, ಹೆದ್ದಾರಿಯ ಮೇಲೆ ವಾಹನ ಅಡ್ಡಲಾಗಿ ಬಿದ್ದ ಪರಿಣಾಮ ಕೆಲಕಾಲ ವಾಹನ ಸವಾರರು‌ ತೊಂದರೆ ಅನುಭವಿಸುವಂತಾಯಿತು. ಓವರ್ ಲೋಡ್ ಮತ್ತು ಅತಿ ವೇಗವೇ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ABOUT THE AUTHOR

...view details