ಕೊಡಗು: ಐತಿಹಾಸಿಕ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ಹೊರ ಬೀಳುವ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಬಾಬ್ರಿ ಮಸೀದಿ ತೀರ್ಪು ಹಿನ್ನೆಲೆ ಕೊಡಗು ಜಿಲ್ಲೆಯಾದ್ಯಂತ ಬಂದೋಬಸ್ತ್..! - Kodagu
ಐತಿಹಾಸಿಕ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ಹೊರ ಬೀಳುವ ಹಿನ್ನೆಲೆಯಲ್ಲಿ ಮಡಿಕೇರಿಯ ಹೊಸ ಬಸ್ ನಿಲ್ದಾಣ ಸೇರಿದಂತೆ ಸೂಕ್ಷ್ಮ ಸ್ಥಳಗಳಲ್ಲಿ ಕೆಎಸ್ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಬಂದೋಬಸ್ತ್..
ಕೊಡಗು ಜಿಲ್ಲೆಯಾದ್ಯಂತ ಬಂದೋಬಸ್ತ್..
ನಗರದ ಚೌಕಿ, ಹೊಸ ಬಸ್ ನಿಲ್ದಾಣ ಸೇರಿದಂತೆ ಸೂಕ್ಷ್ಮ ಸ್ಥಳಗಳಲ್ಲಿ ಕೆಎಸ್ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಹೈಅಲರ್ಟ್ ಆಗಿರುವ ಪೊಲೀಸರು ತೀರ್ಪು ಪ್ರಕಟವಾಗುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.
ಹಾಗೆಯೇ ಯಾವುದೇ ಮೆರವಣಿಗೆ, ಕಾರ್ಯಕ್ರಮಗಳನ್ನು ಮಾಡದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಆದೇಶ ಹೊರಡಿಸಿದ್ದಾರೆ.