ಮಡಿಕೇರಿ:ಕರ್ಫ್ಯೂ ಹಿನ್ನೆಲೆ ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಇದರಿಂದಾಗಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಮುಂಖಾನೆ 6ರಿಂದ ಮಧ್ಯಾಹ್ನದವರಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದ್ದು, ಮಡಿಕೇರಿ ನಗರ ಜನಜಂಗುಳಿಂದ ಕೂಡಿದೆ.
ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ: ಪೊಲೀಸರಿಂದ ದಂಡದ ಬಿಸಿ
ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ ಹಿನ್ನೆಲೆ ಮಡಿಕೇರಿಯಲ್ಲಿ ಜನಜಂಗುಳಿ ಹೆಚ್ಚಾಗಿದೆ.
ನಗರದ ಕೆಸ್ಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳಾಂತರಗೊಂಡ ಮಾರ್ಕೆಟ್ನಲ್ಲಿ ಜನರು ತರಕಾರಿ ಖರೀದಿಸುತ್ತಿದ್ದಾರೆ. ಮಂಗಳವಾರ ಮತ್ತು ಶುಕ್ರವಾರ ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದ್ದು, ಇಂದು ಮುಂಜಾನೆಯಿಂದ ಜನರು ಮುಗಿಬಿದ್ದು ವಸ್ತುಗಳನ್ನು ಕೊಂಡುಕೊಳ್ಳುತ್ತಿದ್ದಾರೆ.
ತರಕಾರಿ ಅಂಗಡಿಯಲ್ಲಿ ಅಂತರ ಕಾಯ್ದುಕೊಳ್ಳದ ಮಾಲೀಕರಿಗೆ ಮತ್ತು ರಸ್ತೆಯಲ್ಲಿ ಮಾಸ್ಕ್ ಹಾಕದದವರಿಗೆ ಪೊಲೀಸರು ದಂಡ ವಿಧಿಸಿದ್ರು. ಅಗತ್ಯ ವಸ್ತುಗಳ ಖರೀದಿಗೆ ಸುತ್ತಮುತ್ತಲಿನ ಹಳ್ಳಿಗಳಿಂದ ಮಡಿಕೇರಿ ನಗರಕ್ಕೆ ಹಲವಾರು ಜನರು ಬರುತ್ತಿದ್ದು, ವಾಹನ ದಟ್ಟಣೆ ಹೆಚ್ಚಾಗಿದೆ.