ಕರ್ನಾಟಕ

karnataka

ETV Bharat / state

ಇಂದು ಮಧ್ಯಾಹ್ನ ತಲಕಾವೇರಿಯಲ್ಲಿ ತೀರ್ಥೋದ್ಭವ: ವಿಸ್ಮಯ ಕಣ್ತುಂಬಿಕೊಳ್ಳಲು ಭಕ್ತರ ಕಾತರ

ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಮಕರ ಲಗ್ನದಲ್ಲಿ ತೀರ್ಥೋದ್ಭವ ಜರುಗಲಿದೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿ ಮಾತೆಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಇದೇ ವೇಳೆ, ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

preparation has been completed  for talacauvery theerthodbhava 2021
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ

By

Published : Oct 17, 2021, 8:37 AM IST

Updated : Oct 17, 2021, 12:53 PM IST

ಕೊಡಗು: ಕರುನಾಡ ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಮಕರ ಲಗ್ನದಲ್ಲಿ ತೀರ್ಥೋದ್ಭವ ಜರುಗಲಿದೆ.

ಮಧ್ಯಾಹ್ನ ತಲಕಾವೇರಿಯಲ್ಲಿ ತೀರ್ಥೋದ್ಭವ - ಪ್ರತಿಕ್ರಿಯೆ

ತೀರ್ಥೋದ್ಭವ ಹಿನ್ನೆಲೆಯಲ್ಲಿ ತಲಕಾವೇರಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ. ವರ್ಷಕ್ಕೊಮ್ಮೆ ಘಟಿಸುವ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಹೀಗಾಗಿ, ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲದಲ್ಲಿ ಸಕಲ ರೀತಿಯ ಏರ್ಪಾಡುಗಳನ್ನು ಮಾಡಲಾಗಿದೆ.

ಇದನ್ನೂ ಓದಿ:ರಾಜಿ ಸಂಧಾನದ ಮೂಲಕ ಇತ್ಯರ್ಥವಾದ ಪ್ರಕರಣಗಳ ಮರುವಿಚಾರಣೆ ಸಾಧ್ಯವಿಲ್ಲ: ಹೈಕೋರ್ಟ್

ನೂಕು‌ನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ವ್ಯವಸ್ಥೆ, ಸಿಸಿ ಕ್ಯಾಮರಾಗಳನ್ನು ಅವಶ್ಯವಿರುವ ಕಡೆಗಳಲ್ಲಿ ಅಳವಡಿಸಲಾಗಿದೆ. ತೀರ್ಥೋದ್ಭವವಾಗುವ ಸುತ್ತ ಮತ್ತು ಕೊಳದ ಸುತ್ತಮುತ್ತಲಿನ ಪ್ರದೇಶವನ್ನು ಬಣ್ಣದ ಹೂಗಳಿಂದ ಆಕರ್ಷಕವಾಗಿ ಶೃಂಗರಿಸಲಾಗಿದೆ. ತೀರ್ಥೋದ್ಭವ ಕಾರಣ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಅರ್ಚಕರ ತಂಡವೂ ಕಾವೇರಿಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ.

Last Updated : Oct 17, 2021, 12:53 PM IST

ABOUT THE AUTHOR

...view details