ಕೊಡಗು: ಎನ್‌ಆರ್‌ಸಿ ಮತ್ತು ಸಿಎಎ ಕಾಯ್ದೆಗಳನ್ನು ವಿರೋಧಿಸಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಎನ್‌ಆರ್‌ಸಿ, ಸಿಎಎ ಖಂಡಿಸಿ ಕೊಡಗಿನಲ್ಲಿ ಸಿಪಿಐಎಂ ಪ್ರತಿಭಟನೆ - ಸಿಪಿಐಎಂ ಪಕ್ಷ ಕೊಡಗಿನಲ್ಲಿ ಪ್ರತಿಭಟನೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರೋಧಿಸಿ ಸಿಪಿಐಎಂ ಪಕ್ಷ ಕೊಡಗಿನಲ್ಲಿ ಪ್ರತಿಭಟನೆ ನಡೆಸಿತು.
ಪ್ರತಿಭಟನಾನಿರತ ಕಾರ್ಯಕರ್ತರು
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದ್ದು ಜಾರಿಗೆ ತಂದಿರುವ ಎನ್‌ಆರ್‌ಸಿ, ಸಿಎಎ ಜನ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕಾಯ್ದೆಗಳನ್ನು ಜಾರಿಗೊಳಿಸದೆ ಜನರ ಹಿತ ಕಾಪಾಡಬೇಕು ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.