ಕರ್ನಾಟಕ

karnataka

ETV Bharat / state

ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ: ಚೀನಾ ವಸ್ತುಗಳನ್ನು ಸುಟ್ಟು ಆಕ್ರೋಶ - India china news

ಗಡಿಯಲ್ಲಿ ಕ್ಯಾತೆ ತೆಗೆದು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿರುವ ಚೀನಾ ನಡೆ ವಿರೋಧಿಸಿ ನಗರದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂಪರ ಸಂಘಟನೆ ಪ್ರತಿಭಟನೆ ನಡೆಸಿತು.

protest against china
ಪ್ರತಿಭಟನೆ

By

Published : Jun 17, 2020, 4:05 PM IST

ಕೊಡಗು: ಚೀನಾ ಯೋಧರು ನಡೆಸಿದ ಅಪ್ರಚೋದಿತ ದಾಳಿಯಿಂದ ಹುತಾತ್ಮರಾದ ಭಾರತದ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂಪರ ಸಂಘಟನೆ ಮೌನಾಚರಣೆ ನಡಸಿತು.

ನಗರದ ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ಜಮಾಯಿಸಿದ ಸಂಘಟನೆ ಸದಸ್ಯರು, ವಿನಾಕಾರಣ ಗಡಿಯಲ್ಲಿ ತಗಾದೆ ತೆಗೆದು ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ ಎಂದು ಚೀನಾ ವಸ್ತುಗಳನ್ನು ಸುಟ್ಟು ಕುತಂತ್ರಿ ಚೀನಾ ವಿರುದ್ಧ ಧಿಕ್ಕಾರ ಕೂಗಿದರು.

ಚೀನಾ ವಿರುದ್ಧ ಪ್ರತಿಭಟನೆ

ತಿಮ್ಮಯ್ಯ ವೃತ್ತದಿಂದ ಯುದ್ದ ಸ್ಮಾರಕದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ಚೀನಾ, ನೇಪಾಳ ಹಾಗೂ ಪಾಕಿಸ್ತಾನದ ಮೊದಲಿನಿಂದಲೂ ಗಡಿ ವಿಚಾರಕ್ಕೆ ತಕರಾರು ತೆಗೆಯುತ್ತಿವೆ. ಪರಿಸ್ಥಿತಿಯ ಲಾಭ ಪಡೆದುಕೊಂಡು ದೇಶದ ಮೇಲೆ ಯುದ್ಧ ಸಾರಲು ಹವಣಿಸುತ್ತಿವೆ. ದೇಶದ ಭದ್ರತೆಯ ವಿಷಯಕ್ಕೆ ಬಂದಾಗ ಭಾರತೀಯರು ಸಂಘಟಿತ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ABOUT THE AUTHOR

...view details