ಕೊಡಗು:ಕೇಂದ್ರ ಸರ್ಕಾರದ ಪೌರತ್ವ ಮಸೂದೆಗೆ ಕೊಡಗಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಡಿಕೇರಿಯಲ್ಲಿ ಮುಸ್ಲಿಂ ಜಮಾಅತ್‌ಗಳ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಪೌರತ್ವ (ತಿದ್ದುಪಡಿ) ಮಸೂದೆ ವಿರೋಧಿಸಿ ಕೊಡಗಿನಲ್ಲಿ ಪ್ರತಿಭಟನೆ - ಪೌರತ್ವ ಕಾಯಿದೆ ವಿರೋಧಿಸಿ ಕೊಡಗಿನಲ್ಲಿ ಪ್ರತಿಭಟನೆ
ಕೇಂದ್ರ ಸರ್ಕಾರದ ಪೌರತ್ವ ಮಸೂದೆ ವಿರೋಧಿಸಿ ಮಡಿಕೇರಿಯಲ್ಲಿ ಮುಸ್ಲಿಂ ಜಮಾಅತ್‌ಗಳ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ನೂರಾರು ಜನ ಧಿಕ್ಕಾರ ಕೂಗಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪೌರತ್ವ ಮಸೂದೆಯನ್ನು ವಾಪಾಸ್ ಪಡೆಯುವಂತೆ ಆಗ್ರಹಿಸಿದರು.
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ನಾವು ಮುಸಾಲ್ಮಾನರು. ನಮ್ಮ ಪೌರತ್ವದ ದಾಖಲೆ ಕೇಳುತ್ತಿರುವುದು ಎಷ್ಟು ಸರಿ?ಕಾಯಿದೆ ಮೂಲಕ ಸಂವಿಧಾನದ 14, 15 ಹಾಗೂ 23 ನೇ ತಿದ್ದುಪಡಿಯ ಉಲ್ಲಂಘನೆ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುನ್ನೆಚ್ಚರಿಕೆ ಉದ್ದೇಶದಿಂದ ಪ್ರತಿಭಟನೆಗೆ ಜಿಲ್ಲಾ ಪೊಲೀಸ್ ವತಿಯಿಂದ ಬಿಗಿ ಭದ್ರತೆ ಒದಗಿಸಲಾಗಿತ್ತು.
Last Updated : Dec 13, 2019, 7:01 PM IST