ಬೆಂಗಳೂರು:ಕೊಡಗು ಜಿಲ್ಲೆಯ ನಾಗರಹೊಳೆ ಅರಣ್ಯ ವಾಸಿಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ, ಅರಣ್ಯಾಧಿಕಾರಿಗಳಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಜೇನು ಕುರುಬ ಸಮುದಾಯದ ಸುಶೀಲಾ ಮತ್ತು ಶಿವು ಸಚಿವರ ಗಮನ ಸೆಳೆದಿದ್ದಾರೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಚಿವರು, ಯಾರ ರಕ್ಷಣೆಯೂ ಇರದ, ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿ ಬದುಕನ್ನು ಕಟ್ಟಿಕೊಂಡಿರುವ ಅರಣ್ಯ ವಾಸಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗೃಹ ಸಚಿವರು ಸೂಚನೆ ನೀಡಿದರು.